34 ಯೆಫ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಹಿಂದಿರುಗಿ ಬರುವಾಗ, ಅವನ ಮಗಳು ದಮ್ಮಡಿಗಳಿಂದಲೂ, ನಾಟ್ಯದಿಂದಲೂ ಅವನನ್ನು ಎದುರುಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು. ಅವಳ ಹೊರತಾಗಿ ಅವನಿಗೆ ಮಗನಾಗಲಿ, ಮಗಳಾಗಲಿ ಇರಲಿಲ್ಲ. 35 ಅವನು ಅವಳನ್ನು ನೋಡಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು, "ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದೆ. ನನ್ನನ್ನು ತೊಂದರೆ ಪಡಿಸುವವರಲ್ಲಿ ನೀನೂ ಒಬ್ಬಳಾದೆ. ಏಕೆಂದರೆ ನಾನು ಯೆಹೋವ ದೇವರಿಗೆ ನನ್ನ ಬಾಯಿತೆರೆದು, ಪ್ರಮಾಣಮಾಡಿದೆನು, ಹಿಂದೆಗೆಯಲಾರೆನು," ಎಂದನು.
Publicidade
ನ್ಯಾಯಸ್ಥಾಪಕರು 11
Estes versículos te tocaram? Ore agora!
+581 estão orando agora.
Junte-se à corrente de oração.