Publicidade

Jó 25

ಬಿಲ್ದದನ ಉತ್ತರ

1 ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನೆಂದರೆ:

2 "ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ;

ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ.

3 ದೇವರ ಸೈನ್ಯಗಳಿಗೆ ಲೆಕ್ಕ ಉಂಟೋ?

ಯಾರ ಮೇಲೆ ದೇವರ ಬೆಳಕು ಮೂಡುವುದಿಲ್ಲ?

4 ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ?

ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ?

5 ಇಗೋ, ಚಂದ್ರನೂ ಪ್ರಕಾಶಮಾನವಾಗಿರುವದಿಲ್ಲ;

ನಕ್ಷತ್ರಗಳಾದರೂ ದೇವರ ದೃಷ್ಟಿಗೆ ಶುದ್ಧವಾದವುಗಳಲ್ಲ.

6 ಹೀಗಿರುವಲ್ಲಿ ಹುಳುವಿನಂಥ ಮನುಷ್ಯನು ದೇವರ ದೃಷ್ಟಿಯಲ್ಲಿ ಎಷ್ಟೋ ಕಡಿಮೆ!

ಕ್ರಿಮಿಯಂಥ ಮನವರು ಎಷ್ಟೋ ಅಲ್ಪರು!"

Veja também

Publicidade
Bíblia Online Bíblia Online

Bíblia Online • Versão: 2026-06-19_11-20-24-