Pular para o conteúdo
Publicidade

ಯೋಬ 38:4,5,8,12,31

OKCV Kannada Contemporary Version

4 "ನಾನು ಭೂಮಿಗೆ ಅಸ್ತಿವಾರ ಹಾಕಿದಾಗ, ನೀನು ಎಲ್ಲಿ ಇದ್ದೀ?

ನಿನಗೆ ತಿಳುವಳಿಕೆ ಇದ್ದರೆ ನನಗೆ ಹೇಳು.

5 ಭೂಮಿಯ ಅಳತೆಯನ್ನು ಗೊತ್ತುಮಾಡಿದವರು ಯಾರು? ನಿಶ್ಚಯವಾಗಿ ನಿನಗೆ ಗೊತ್ತಿರಬೇಕಲ್ಲಾ?

ಭೂಮಿಯ ಮೇಲೆ ನೂಲು ಹಿಡಿದವರು ಯಾರು?

8 "ಭೂಗರ್ಭವನ್ನು ನುಗ್ಗಿಕೊಂಡು ಬಂದ,

ಸಮುದ್ರವನ್ನು ದ್ವಾರಗಳಿಂದ ಮುಚ್ಚಿದವರು ಯಾರು?

12 "ಯೋಬನೇ, ನಿನ್ನ ಜೀವಮಾನದಲ್ಲಿ ಎಂದಾದರೂ, ‘ಅರುಣೋದಯವಾಗಲಿ,’ ಎಂದು ಆಜ್ಞಾಪಿಸಿರುವೆಯಾ?

ಮುಂಜಾನೆಯ ಬೆಳಗಿಗೆ ಅದರ ಸ್ಥಳವನ್ನು ತಿಳಿಯಪಡಿಸಿರುವೆಯಾ?

31 "ನೀನು ಕೃತ್ತಿಕೆಯ ಸರಪಣಿಯನ್ನು ಬಂಧಿಸಬಲ್ಲೆಯಾ?

ಮೃಗಶಿರದ ಸಂಕೋಲೆಯನ್ನು ಬಿಚ್ಚಬಲ್ಲೆಯಾ?

Em outras traduções

  1. IRVKAN Indian Revised Version (IRV) - Kannada - 2019

    4 ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ?

    ನೀನು ಜ್ಞಾನಿಯಾಗಿದ್ದರೆ ಹೇಳು.

    5 ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ.

    ಅದರ ಮೇಲೆ ನೂಲುಹಿಡಿದವರು ಯಾರು?

    8 ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು,

    ಅದರ ದ್ವಾರಗಳನ್ನು ಮುಚ್ಚಿದವರು ಯಾರು?

    12 ನಿನ್ನ ಜೀವಮಾನದಲ್ಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯೋ?

    ಮುಂಜಾನೆಯ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದೆಯಾ?

    31 ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು,

    ಮೃಗಶಿರದ ಸಂಕೋಲೆಯನ್ನು ಬಿಚ್ಚುವೆಯಾ?

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.