ಸಮಾಪ್ತಿ
7 ಯೆಹೋವ ದೇವರು ಯೋಬನ ಸಂಗಡ ಮಾತಾಡಿದ ತರುವಾಯ, ತೇಮಾನ್ಯನಾದ ಎಲೀಫಜನಿಗೆ, "ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ನನಗೆ ಕೋಪವಿದೆ. ಏಕೆಂದರೆ ನೀವು ನನ್ನ ದಾಸನಾದ ಯೋಬನಂತೆ ನೀವು ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ. 8 ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ," ಎಂದು ಹೇಳಿದರು.