13 ಆದರೆ ದೂತನು ಅವನಿಗೆ, "ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’1:13 ಯೋಹಾನ ಅಂದರೆ, ದೇವರ ದಯೆಯುಳ್ಳವನು ಎಂದು ಹೆಸರನ್ನಿಡಬೇಕು. 14 ಅನೇಕರು ಅವನ ಜನನಕ್ಕೆ ಸಂತೋಷಪಡುವರು, ನಿನಗೆ ಆನಂದವೂ ಉಲ್ಲಾಸವೂ ಆಗುವುದು,