16 ಅವನು ಇಸ್ರಾಯೇಲರಲ್ಲಿ ಅನೇಕರನ್ನು ಅವರ ಕರ್ತದೇವರ ಕಡೆಗೆ ತಿರುಗಿಸುವನು. 17 ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು," ಎಂದು ಹೇಳಿದನು.
Publicidade