30 ಆ ದೇವದೂತನು ಆಕೆಗೆ, "ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ. 31 ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’1:31 ಯೇಸು ಅಂದರೆ, ಪ್ರಭುವು ರಕ್ಷಿಸುವನು ಎಂದು ಹೆಸರಿಡಬೇಕು. 32 ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು. 33 ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ," ಎಂದು ಹೇಳಿದನು.
Publicidade