ಮರಿಯಳ ಹಾಡು
46 ಆಗ ಮರಿಯಳು ಹೀಗೆ ಹೇಳಿದ್ದು:
"ನನ್ನ ಪ್ರಾಣವು ಕರ್ತದೇವರನ್ನು ಸ್ತುತಿಸುತ್ತದೆ,
47 ನನ್ನ ಆತ್ಮವು ನನ್ನ ರಕ್ಷಕ ದೇವರಲ್ಲಿ ಉಲ್ಲಾಸಗೊಂಡಿದೆ.
48 ದೇವರು ತಮ್ಮ ದಾಸಿಯ
ದೀನಸ್ಥಿತಿಯನ್ನು ಲಕ್ಷಿಸಿದ್ದಾರೆ.
ಇಂದಿನಿಂದ ತಲತಲಾಂತರದವರೆಲ್ಲರೂ ನನ್ನನ್ನು ಧನ್ಯಳೆಂದು ಕರೆಯುವರು,
49 ಪರಾಕ್ರಮಿಯಾದ ದೇವರು ನನಗೆ ಮಹಾಕಾರ್ಯಗಳನ್ನು ಮಾಡಿದ್ದಾರೆ,
ಅವರ ಹೆಸರು ಪವಿತ್ರವಾದದ್ದು.
50 ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ,
ಅವರ ಕರುಣೆಯು ತಲತಲಾಂತರಗಳಿಗೂ ಇರುವುದು.
51 ದೇವರು ತಮ್ಮ ಭುಜಪರಾಕ್ರಮವನ್ನು ಮಾಡಿ;
ಹೃದಯದ ಯೋಚನೆಯಲ್ಲಿ ಗರ್ವಿಷ್ಠರಾದವರನ್ನು ಚದರಿಸಿಬಿಟ್ಟಿದ್ದಾರೆ.
52 ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗೆ ದಬ್ಬಿ,
ದೀನರನ್ನು ಮೇಲಕ್ಕೆ ಎತ್ತಿದ್ದಾರೆ.
53 ಹಸಿದವರನ್ನು ಒಳ್ಳೆಯವುಗಳಿಂದ ತುಂಬಿಸಿ,
ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾರೆ.
54,55 ನಮ್ಮ ಪಿತೃಗಳಾದ
ಅಬ್ರಹಾಮನಿಗೂ ಅವನ ಸಂತತಿಗೂ
ತಾವು ವಾಗ್ದಾನಮಾಡಿದ ತಮ್ಮ ನಿತ್ಯ ಕರುಣೆಯನ್ನು
ಜ್ಞಾಪಕಮಾಡಿಕೊಂಡು, ತಮ್ಮ ಸೇವಕನಾದ ಇಸ್ರಾಯೇಲನಿಗೆ, ದೇವರು ಸಹಾಯ ಮಾಡಿದ್ದಾರೆ."