12 ಯೇಸು ಒಂದು ಹಳ್ಳಿಯನ್ನು ಪ್ರವೇಶಿಸಿದಾಗ, ಹತ್ತು ಮಂದಿ ಕುಷ್ಠರೋಗಿಗಳು ಯೇಸುವಿನ ಕಡೆಗೆ ಬಂದು ದೂರದಲ್ಲಿ ನಿಂತುಕೊಂಡು, 13 "ಯೇಸುವೇ, ಗುರುವೇ, ನಮ್ಮನ್ನು ಕರುಣಿಸು!" ಎಂದು ತಮ್ಮ ಧ್ವನಿಯೆತ್ತಿ ಕೂಗಿದರು.
14 ಯೇಸು ಅವರನ್ನು ನೋಡಿ, "ಹೋಗಿ, ಯಾಜಕರಿಗೆ ನಿಮ್ಮನ್ನು ತೋರಿಸಿಕೊಳ್ಳಿರಿ,"17:14 ಯಾಜಕ 14:2-32 ಎಂದರು. ಅವರು ಹೋಗುತ್ತಿರುವಾಗಲೇ ಸ್ವಸ್ಥರಾದರು.
15 ಅವರಲ್ಲಿ ಒಬ್ಬನು, ತಾನು ಸ್ವಸ್ಥವಾದದ್ದನ್ನು ಕಂಡು, ಮಹಾಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಹಿಂದಿರುಗಿ ಬಂದು, 16 ಯೇಸುವಿನ ಪಾದಕ್ಕೆ ಅಡ್ಡಬಿದ್ದು, ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದನು. ಅವನೋ ಸಮಾರ್ಯದವನಾಗಿದ್ದನು.
17 ಯೇಸು ಅವನಿಗೆ, "ಆ ಎಲ್ಲಾ ಹತ್ತು ಮಂದಿ ಸ್ವಸ್ಥರಾದರಲ್ಲವೆ? ಉಳಿದ ಒಂಬತ್ತು ಮಂದಿ ಎಲ್ಲಿ? 18 ದೇವರನ್ನು ಮಹಿಮೆಪಡಿಸುವುದಕ್ಕೆ ಈ ವಿದೇಶಿಯೇ ಹೊರತು ಯಾರೂ ಹಿಂದಿರುಗಲಿಲ್ಲವೇ?" 19 ಎಂದು ಹೇಳಿ ಅವನಿಗೆ, "ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ," ಎಂದರು.