34 ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, "ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು. 35 ಹೀಗೆ ಅನೇಕ ಹೃದಯಗಳ ಆಲೋಚನೆಗಳು ಪ್ರಕಟವಾಗುವವು. ನಿನ್ನ ಸ್ವಂತ ಪ್ರಾಣವನ್ನು ಸಹ ಖಡ್ಗವು ತಿವಿಯುವುದು" ಎಂದನು.
Publicidade