8 ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು, ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು. 9 ಆಗ ಕರ್ತದೇವರ ದೂತನು ಅವರಿಗೆ ಪ್ರತ್ಯಕ್ಷನಾದನು. ಕರ್ತದೇವರ ಮಹಿಮೆಯು ಅವರ ಸುತ್ತಲೂ ಪ್ರಕಾಶಿಸಿತು, ಅವರು ಬಹಳವಾಗಿ ಹೆದರಿದರು. 10 ಆ ದೂತನು ಅವರಿಗೆ, "ಹೆದರಬೇಡಿರಿ. ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಶುಭಸಮಾಚಾರವನ್ನು ನಾನು ನಿಮಗೆ ತಿಳಿಸುತ್ತೇನೆ.