8 ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು, ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು. 9 ಆಗ ಕರ್ತದೇವರ ದೂತನು ಅವರಿಗೆ ಪ್ರತ್ಯಕ್ಷನಾದನು. ಕರ್ತದೇವರ ಮಹಿಮೆಯು ಅವರ ಸುತ್ತಲೂ ಪ್ರಕಾಶಿಸಿತು, ಅವರು ಬಹಳವಾಗಿ ಹೆದರಿದರು. 10 ಆ ದೂತನು ಅವರಿಗೆ, "ಹೆದರಬೇಡಿರಿ. ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಶುಭಸಮಾಚಾರವನ್ನು ನಾನು ನಿಮಗೆ ತಿಳಿಸುತ್ತೇನೆ. 11 ಅದೇನೆಂದರೆ, ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕರು ಹುಟ್ಟಿದ್ದಾರೆ. ಅವರು ಯಾರೆಂದರೆ ಕರ್ತದೇವರು ಆಗಿರುವ ಕ್ರಿಸ್ತ.