ಯೇಸುವಿನ ದೀಕ್ಷಾಸ್ನಾನ ಹಾಗೂ ವಂಶಾವಳಿ
21 ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು, ಆಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥಿಸುತ್ತಿರುವಲ್ಲಿ, ಸ್ವರ್ಗವು ತೆರೆಯಿತು. 22 ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, "ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ," ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.