Pular para o conteúdo
Publicidade

ಪ್ರಲಾಪಗಳು 3:1-9

1 ಯೆಹೋವ ದೇವರ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ

ಮನುಷ್ಯನು ನಾನೇ.

2 ಅವರು ನನ್ನನ್ನು ಕರೆತಂದು ನಡೆಸಿದ್ದು

ಕತ್ತಲೆಗೇ ಹೊರತು ಬೆಳಕಿಗಲ್ಲ.

3 ನಿಶ್ಚಯವಾಗಿ ಅವರು ನನಗೆ ವಿರೋಧವಾಗಿ ತಿರುಗಿದ್ದಾರೆ.

ಅವರು ದಿನವೆಲ್ಲಾ ತಮ್ಮ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾರೆ.

4 ನನ್ನ ಮಾಂಸ, ಚರ್ಮವನ್ನು ಆತನು ಹಳೆಯದನ್ನಾಗಿ ಮಾಡಿದ್ದಾರೆ.

ಅವರು ನನ್ನ ಎಲುಬುಗಳನ್ನು ಮುರಿದಿದ್ದಾರೆ.

5 ಅವರು ನನಗೆ ವಿರೋಧವಾಗಿ ಕಟ್ಟಿದ್ದಾರೆ ಮತ್ತು ನನ್ನನ್ನು ವಿಷದಿಂದಲೂ,

ಸಂಕಟದಿಂದಲೂ ಸುತ್ತಿಕೊಂಡಿದ್ದಾರೆ.

6 ಅವರು ನನ್ನನ್ನು ಬಹುಕಾಲದ ಹಿಂದೆ ಸತ್ತವರ ಹಾಗೆ,

ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾರೆ.

7 ನಾನು ಹೊರಗೆ ಬಾರದ ಹಾಗೆ, ಅವರು ನನ್ನ ಸುತ್ತಲೂ ಗೋಡೆಯನ್ನು ಕಟ್ಟಿದ್ದಾರೆ.

ಅವರು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾರೆ.

8 ನಾನು ಕರೆದು ಕೂಗಿದರೂ

ಅವರು ನನ್ನ ಪ್ರಾರ್ಥನೆಯನ್ನು ಲಾಲಿಸುವುದಿಲ್ಲ.

9 ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ,

ಆ ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.

Estes versículos te tocaram? Ore agora!

+581 estão orando agora.

Junte-se à corrente de oração.

Lamentações
Ver todos os capítulos de Lamentações