21 ಇದನ್ನು ನಾನು ನನ್ನ ಮನಸ್ಸಿಗೆ ತಂದುಕೊಳ್ಳುತ್ತೇನೆ.
ಆದ್ದರಿಂದ ನನಗೆ ನಿರೀಕ್ಷೆ ಇದೆ.
22 ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ.
ಏಕೆಂದರೆ ಅವರ ಅನುಕಂಪಗಳು ಮುಗಿಯುವುದಿಲ್ಲ.
23 ಅವು ಪ್ರತಿ ಮುಂಜಾನೆಯೂ ಹೊಸದಾಗಿರುವುವು.
ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
24 "ಯೆಹೋವ ದೇವರೇ ನನ್ನ ಪಾಲು,
ಆದ್ದರಿಂದ ನಾನು ಅವರಿಗಾಗಿ ಕಾದಿರುತ್ತೇನೆ,"
ಎಂದು ನಾನು ನನ್ನೊಳಗೆ ಎಂದುಕೊಳ್ಳುವೆನು.
25 ಆತನನ್ನು ನಿರೀಕ್ಷಿಸುವವರಿಗೂ,
ಆತನನ್ನು ಹುಡಕುವವರಿಗೂ ಯೆಹೋವ ದೇವರು ಒಳ್ಳೆಯವರಾಗಿದ್ದಾರೆ.
26 ಮನುಷ್ಯನು ಮೌನವಾಗಿ
ಯೆಹೋವ ದೇವರ ರಕ್ಷಣೆಗೆ ಕಾಯುವುದು ಒಳ್ಳೆಯದು.