Pular para o conteúdo
Publicidade

ಯಾಜಕಕಾಂಡ 24:5-9

OKCV Kannada Contemporary Version

5 "ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು24:5 ಎಫಾದ ಹತ್ತರಲ್ಲಿ ಎರಡನೆಯ ಭಾಗ, ಅಂದರೆ 3.2 ಕಿಲೋಗ್ರಾಂ ಇರಬೇಕು. 6 ಅವುಗಳನ್ನು ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ, ಎರಡು ಸಾಲುಗಳನ್ನಾಗಿ ಇಡಬೇಕು. 7 ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. 8 ಪ್ರತಿಯೊಂದು ಸಬ್ಬತ್ ದಿನದಲ್ಲಿಯೂ ಯೆಹೋವ ದೇವರ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮಪಡಿಸಬೇಕು. ಇದು ಇಸ್ರಾಯೇಲರ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು. 9 ಅದು ಆರೋನನ ಮತ್ತು ಅವನ ಪುತ್ರರದಾಗಿರಬೇಕು. ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ನಿತ್ಯವಾದ ನಿಯಮವಾಗಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವವುಗಳಲ್ಲಿ ಅವನಿಗೆ ಮಹಾಪರಿಶುದ್ಧವಾಗಿರುವುದು."

Em outras traduções

  1. IRVKAN Indian Revised Version (IRV) - Kannada - 2019

    5 "ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು24:5 ಆರಾರು ಸೇರಿನದಾಗಿರಬೇಕು ಅಥವಾ ಏಫಾದ ಹತ್ತರಲ್ಲಿ ಎರಡನೆಯ ಭಾಗ.. 6 ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು. 7 ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು. 8 ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು. 9 ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು" ಅಂದನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.