Pular para o conteúdo
Publicidade

ಯಾಜಕಕಾಂಡ 25:25,47-49

OKCV Kannada Contemporary Version

25 " ‘ನಿಮ್ಮ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸೊತ್ತಿನಲ್ಲಿ ಸ್ವಲ್ಪವನ್ನು ಮಾರಿದರೆ, ಅವನ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.

47 " ‘ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿ ಇಲ್ಲವೆ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು. 48 ಅವನ ಸಹೋದರರಲ್ಲಿ ಒಬ್ಬನು ಈಡುಕೊಟ್ಟು ಅವನನ್ನು ವಿಮೋಚಿಸಬಹುದು. 49 ಅವನ ಚಿಕ್ಕಪ್ಪನಾಗಲಿ ಇಲ್ಲವೆ ಅವನ ಚಿಕ್ಕಪ್ಪನ ಮಗನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸಮೀಪವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.

Em outras traduções

  1. IRVKAN Indian Revised Version (IRV) - Kannada - 2019

    25 "‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.

    47 "‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು. 48 ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು. 49 ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.