ಯೇಸು ಅನೇಕರನ್ನು ಗುಣಪಡಿಸಿದ್ದು
29 ಅವರು ಸಭಾಮಂದಿರವನ್ನು ಬಿಟ್ಟ ಕೂಡಲೇ, ಯಾಕೋಬ ಯೋಹಾನರೊಡನೆ ಸೀಮೋನ ಅಂದ್ರೆಯರ ಮನೆಗೆ ಹೋದರು. 30 ಅಲ್ಲಿ ಸೀಮೋನನ ಅತ್ತೆಯು ಜ್ವರದಿಂದ ಮಲಗಿದ್ದಳು. ಕೂಡಲೇ ಅವರು ಆಕೆಯ ವಿಷಯವಾಗಿ ಯೇಸುವಿಗೆ ತಿಳಿಸಿದರು. 31 ಯೇಸು ಆಕೆಯ ಬಳಿಗೆ ಬಂದು, ಕೈಹಿಡಿದು ಎಬ್ಬಿಸಿದರು. ಜ್ವರವು ಆಕೆಯನ್ನು ಬಿಟ್ಟುಹೋಯಿತು ಮತ್ತು ಆಕೆಯು ಅವರಿಗೆ ಉಪಚರಿಸಿದಳು.