6 ಆದರೆ ಯೇಸು, "ಈಕೆಯನ್ನು ಬಿಟ್ಟುಬಿಡಿರಿ, ಈಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ. 7 ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ.14:7 ಧರ್ಮೋ 15:11 ನಿಮಗೆ ಮನಸ್ಸಿದ್ದರೆ, ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ. 8 ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹವನ್ನು ಅಭಿಷೇಕಿಸಿದ್ದಾಳೆ. 9 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು," ಎಂದರು.
Publicidade