15 ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ತಿರಸ್ಕಾರ ಹೊಂದಿದ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು. ಬಹುಜನರು ಅವರನ್ನು ಹಿಂಬಾಲಿಸುತ್ತಿದ್ದರು. 16 ಫರಿಸಾಯರಾದ ನಿಯಮ ಬೋಧಕರು ಪಾಪಿಗಳ ಮತ್ತು ಸುಂಕದವರ ಸಂಗಡ ಯೇಸು ಊಟಮಾಡುವುದನ್ನು ಕಂಡು, "ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?" ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.
17 ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, "ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ," ಎಂದು ಹೇಳಿದರು.