38 ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, "ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?" ಎಂದು ಕೇಳಿದರು.
39 ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, "ಸುಮ್ಮನಿರು, ಶಾಂತವಾಗು!" ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.
40 ಯೇಸು ತಮ್ಮ ಶಿಷ್ಯರಿಗೆ, "ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?" ಎಂದರು.