39 ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, "ಸುಮ್ಮನಿರು, ಶಾಂತವಾಗು!" ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.
40 ಯೇಸು ತಮ್ಮ ಶಿಷ್ಯರಿಗೆ, "ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?" ಎಂದರು.
41 ಶಿಷ್ಯರು ಭಯಭೀತರಾಗಿ, "ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!" ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.