Pular para o conteúdo
Publicidade

ಮಲಾಕಿ 3:7-11

OKCV Kannada Contemporary Version

7 ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಅನುಸರಿಸಲಿಲ್ಲ. ನನ್ನ ಬಳಿಗೆ ತಿರುಗಿಕೊಳ್ಳಿರಿ. ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು," ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

"ಆದರೆ ನೀವು, ‘ಯಾವುದರಲ್ಲಿ ತಿರುಗಿಕೊಳ್ಳೋಣ?’ ಎಂದು ಹೇಳುತ್ತೀರಿ.

8 "ಮನುಷ್ಯನು ದೇವರಿಂದ ಕದ್ದುಕೊಳ್ಳಲು ಸಾಧ್ಯವೇ? ಆದರೂ ನೀವು ನನ್ನಿಂದ ಕಳ್ಳತನ ಮಾಡಿದ್ದೀರಿ.

"ಆದರೆ ನೀವು, ‘ಯಾವುದರಲ್ಲಿ ನಿನ್ನದನ್ನು ಕಳ್ಳತನ ಮಾಡಿದ್ದೇವೆ?’ ಎಂದು ಕೇಳುತ್ತೀರಿ.

"ದಶಮಭಾಗ ಮತ್ತು ಅರ್ಪಣೆಗಳಲ್ಲಿಯೇ! 9 ಇದರಿಂದ ಶಾಪವು ನಿಮಗಾಯಿತು, ಏಕೆಂದರೆ ನೀವು, ಈ ಸಮಸ್ತ ಜನಾಂಗವೇ ನನ್ನಲ್ಲಿ ಕಳ್ಳತನ ಮಾಡುತ್ತಿದ್ದಿರಿ. 10 ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?" ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. 11 "ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ," ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

Em outras traduções

  1. IRVKAN Indian Revised Version (IRV) - Kannada - 2019

    7 "ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು" ಇದು ಸೇನಾಧೀಶ್ವರನಾದ ಯೆಹೋವನ ನುಡಿ. "ಯಾವ ವಿಷಯದಲ್ಲಿ ತಿರುಗೋಣ?" ಎನ್ನುತ್ತೀರಿ. 8 "ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ. 9 ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ. 10 ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ. 11 ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು" ಇದು ಸೇನಾಧೀಶ್ವರನಾದ ಯೆಹೋವನ ನುಡಿ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.

Malaquias
Ver todos os capítulos de Malaquias