20 ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, "ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ. 21 ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು1:21 ಯೇಸು ಎಂಬುದು ಗ್ರೀಕ್ ರೂಪವಾದ ಯೆಹೋಶುವಾ ಇದರ ಅರ್ಥ ಯೆಹೋವ ದೇವರು ರಕ್ಷಿಸುವರು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು," ಎಂದು ಹೇಳಿದನು.
22 ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು: 23 "ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’1:23 ಯೆಶಾಯ 7:14 ಎಂದು ಹೆಸರಿಡುವರು." ಈ ಹೆಸರಿನ ಅರ್ಥ, "ದೇವರು ನಮ್ಮ ಸಂಗಡ ಇದ್ದಾರೆ," ಎಂಬುದು.
24 ಯೋಸೇಫನು ನಿದ್ದೆಯಿಂದ ಎದ್ದ ಮೇಲೆ, ಕರ್ತನ ದೂತನು ಆಜ್ಞಾಪಿಸಿದಂತೆ ಮರಿಯಳನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು. 25 ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ "ಯೇಸು" ಎಂದು ಹೆಸರಿಟ್ಟನು.