31 ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ. 32 ಯಾರಾದರೂ ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ, ಈ ಯುಗದಲ್ಲೇ ಆಗಲಿ ಬರುವ ಯುಗದಲ್ಲೇ ಆಗಲಿ ಅದಕ್ಕಾಗಿ ಅವರಿಗೆ ಕ್ಷಮೆ ದೊರಕುವುದಿಲ್ಲ.