13 ಆದ್ದರಿಂದ, ನಾನು ಅವರೊಡನೆ ಸಾಮ್ಯಗಳಲ್ಲಿ ಮಾತನಾಡುತ್ತೇನೆ:
"ಏಕೆಂದರೆ ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ;
ಕೇಳಿದರೂ ತಿಳಿದುಕೊಳ್ಳುವುದಿಲ್ಲ; ಅವರು ಗ್ರಹಿಸುವುದೂ ಇಲ್ಲ.
14 ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನೆಂದರೆ,
" ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ;
ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.
15 ಈ ಜನರ ಹೃದಯವು ಕಠೋರವಾಗಿದೆ;
ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ,
ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ.
ಇಲ್ಲವಾದರೆ ತಾವು ಕಣ್ಣಿನಿಂದ ಕಂಡು,
ಕಿವಿಯಿಂದ ಕೇಳಿ.
ತಮ್ಮ ಹೃದಯದಿಂದ ತಿಳಿದು,
ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’13:15 ಯೆಶಾಯ 6:9,10
ಎಂಬುದೇ.