28 ಆಗ ಪೇತ್ರನು ಯೇಸುವಿಗೆ, "ಸ್ವಾಮೀ, ನೀವೇ ಆಗಿದ್ದರೆ, ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರಲು ನನಗೆ ಅಪ್ಪಣೆಕೊಡಿರಿ," ಎಂದನು.
29 ಅದಕ್ಕೆ ಯೇಸು, "ಬಾ," ಎಂದರು.
ಆಗ ಪೇತ್ರನು ದೋಣಿಯಿಂದ ಇಳಿದು, ಯೇಸುವಿನ ಬಳಿಗೆ ಹೋಗುವುದಕ್ಕಾಗಿ ನೀರಿನ ಮೇಲೆ ನಡೆದನು. 30 ಆದರೆ ಬಲವಾದ ಗಾಳಿಯನ್ನು ಕಂಡು, ಅವನು ಭಯಪಟ್ಟು ಮುಳುಗುತ್ತಾ, "ಸ್ವಾಮಿ, ನನ್ನನ್ನು ಕಾಪಾಡಿರಿ!" ಎಂದು ಕೂಗಿ ಹೇಳಿದನು.
31 ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, "ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?" ಎಂದರು.