3 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, "ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ನೀವು ದೇವರ ಆಜ್ಞೆಯನ್ನು ಏಕೆ ಮೀರುತ್ತೀರಿ? 4 ‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’15:4 ವಿಮೋ 20:12; ಧರ್ಮೋ 5:16 ಎಂದೂ ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’15:4 ವಿಮೋ 21:17; ಯಾಜಕ 20:9 ಎಂದು ದೇವರು ಹೇಳಿದ್ದಾರೆ. 5 ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ, 6 ‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ. 7 ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ:
8 " ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ,
ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
9 ಅವರು ಮನುಷ್ಯರ ಆಜ್ಞೆಗಳನ್ನು ಉಪದೇಶಗಳನ್ನಾಗಿ ಬೋಧಿಸುವುದರಿಂದ
ನನ್ನನ್ನು ಆರಾಧಿಸುವುದು ವ್ಯರ್ಥ.’15:9 ಯೆಶಾಯ 29:13"