ಸಹೋದರನು ನಿಮಗೆ ವಿರುದ್ಧವಾಗಿ ಪಾಪಮಾಡಿದರೆ
15 "ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ. 16 ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’18:16 ಧರ್ಮೋ 19:15 17 ಅವರು ಅವರಿಗೂ ಕಿವಿಗೊಡದೆ ಹೋದರೆ ಅದನ್ನು ಸಭೆಗೆ ತಿಳಿಸು. ಅವರು ಸಭೆಗೂ ಕಿವಿಗೊಡದೆ ಹೋದರೆ, ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
18 "ನೀವು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀರೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀವು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
19 "ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು. 20 ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ," ಎಂದರು.