ತಾಯಿಯ ಬೇಡಿಕೆ
20 ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುವಿನ ಬಳಿಗೆ ಬಂದು, ಅವರ ಮುಂದೆ ಮೊಣಕಾಲೂರಿ ಬೇಡಿಕೊಂಡಳು.
21 ಯೇಸು, "ನಿನ್ನ ಬೇಡಿಕೆ ಏನು?" ಎಂದು ಕೇಳಿದರು.
"ನಿಮ್ಮ ರಾಜ್ಯದಲ್ಲಿ ಈ ನನ್ನ ಇಬ್ಬರು ಪುತ್ರರಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹಿಸಬೇಕು," ಎಂದು ಬೇಡಿಕೊಂಡಳು.
24 ಬೇರೆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. 25 ಆದರೆ ಯೇಸು ಶಿಷ್ಯರನ್ನು ತಮ್ಮ ಹತ್ತಿರಕ್ಕೆ ಕರೆದು, "ಯೆಹೂದ್ಯರಲ್ಲದವರ ಅಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದೊರೆತನ ಮಾಡುತ್ತಾರೆಂದೂ ಉನ್ನತ ಅಧಿಕಾರಿಗಳು ಅವರ ಮೇಲೆ ಅಧಿಕಾರವನ್ನು ನಡೆಸುತ್ತಾರೆಂದೂ ನಿಮಗೆ ತಿಳಿದಿದೆ. 26 ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ. 27 ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆಂದಿದ್ದರೆ, ಅವನು ನಿಮ್ಮ ಆಳಾಗಿರಲಿ. 28 ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ," ಎಂದು ಹೇಳಿದರು.