ವೈರಿಗಳನ್ನು ಪ್ರೀತಿಸುವುದು
43 " ‘ನಿನ್ನ ನೆರೆಯವನನ್ನು ಪ್ರೀತಿಸಿ,5:43 ಯಾಜಕ 19:18 ನಿನ್ನ ವೈರಿಯನ್ನು ದ್ವೇಷಿಸು,’ ಎಂದು ಹೇಳಿರುವುದನ್ನು ಕೇಳಿದ್ದೀರಿ. 44 ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ. 45 ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ. 46 ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ?