ದಾನಧರ್ಮ ಮಾಡುವುದು
1 "ಜನರು ನೋಡಲಿ ಎಂದು ಅವರ ಮುಂದೆ, ನಿಮ್ಮ ದಾನಧರ್ಮಗಳನ್ನು ಮಾಡದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಕ್ಕುವುದಿಲ್ಲ.
2 "ಆದ್ದರಿಂದ ನೀನು ದಾನಧರ್ಮ ಮಾಡುವಾಗ, ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳ ಹಾಗೆ ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ತುತೂರಿಯನ್ನು ಊದಿಸಬೇಡ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 3 ಆದರೆ ನೀನು ದಾನಧರ್ಮ ಮಾಡುವಾಗ, ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೆ ತಿಳಿಯದಿರಲಿ. 4 ಹೀಗೆ ನಿನ್ನ ದಾನಧರ್ಮವು ಗುಟ್ಟಾಗಿರುವಾಗ, ಅಂತರಂಗದಲ್ಲಿ ಮಾಡುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.
6 ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು.