ಬುದ್ಧಿವಂತ ಹಾಗೂ ಬುದ್ಧಿಹೀನ
24 "ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ. 25 ಮಳೆಯು ಸುರಿದು ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಆ ಮನೆ ಬೀಳಲಿಲ್ಲ. ಏಕೆಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಕಟ್ಟಲಾಗಿತ್ತು. 26 ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ, ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಸಮಾನ. 27 ಮಳೆಯು ಸುರಿದು, ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆಗ ಆ ಮನೆ ಕುಸಿದು ಬಿತ್ತು. ಅದರ ಬೀಳುವಿಕೆಯು ಭಯಂಕರವಾಗಿತ್ತು," ಎಂದರು.