ನಿನೆವೆ ಮೇಲೆ ಯೆಹೋವ ದೇವರ ರೌದ್ರ
2 ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು.
ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ.
ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ.
ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ,
ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.
3 ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು.
ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು.
ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ.
ಮೇಘಗಳು ಅವರ ಕಾಲುಗಳ ಧೂಳೇ.