Pular para o conteúdo
Publicidade

ನಹೂಮ 1:2-8

ನಿನೆವೆ ಮೇಲೆ ಯೆಹೋವ ದೇವರ ರೌದ್ರ

2 ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು.

ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ.

ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ.

ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ,

ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.

3 ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು.

ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು.

ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ.

ಮೇಘಗಳು ಅವರ ಕಾಲುಗಳ ಧೂಳೇ.

4 ಅವರು ಸಮುದ್ರವನ್ನು ಗದರಿಸಿ, ಅದನ್ನು ಒಣಗುವಂತೆ ಮಾಡುತ್ತಾರೆ.

ಸಕಲನದಿಗಳನ್ನು ಬತ್ತಿಸುತ್ತಾರೆ.

ಬಾಷಾನು, ಕರ್ಮೆಲು ಬಾಡಿ ಹೋಗುತ್ತವೆ

ಮತ್ತು ಲೆಬನೋನಿನ ಹೂವು ಬಾಡಿ ಹೋಗುತ್ತದೆ.

5 ಬೆಟ್ಟಗಳು ಅವರ ಮುಂದೆ ಕಂಪಿಸುತ್ತವೆ;

ಗುಡ್ಡಗಳು ಕರಗುತ್ತವೆ;

ಭೂಮಿಯೂ, ಲೋಕವೂ, ಅದರ ನಿವಾಸಿಗಳೆಲ್ಲವೂ

ಅವರ ಮುಂದೆ ನಡುಗುತ್ತವೆ.

6 ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು?

ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು?

ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ;

ಬಂಡೆಗಳು ಆತನ ಮುಂದೆ ಕೆಡವಲಾಗಿವೆ.

7 ಯೆಹೋವ ದೇವರು ಒಳ್ಳೆಯವರು.

ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ.

ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.

8 ಆದರೆ ಮೇರೆ ಮೀರುವ ಪ್ರಳಯದಿಂದ

ನಿನೆವೆಯನ್ನು ಮುಗಿಸಿಬಿಡುವರು.

ಕತ್ತಲೆ ಅವರ ಶತ್ರಗಳನ್ನು ಹಿಂದಟ್ಟುವುದು.

Estes versículos te tocaram? Ore agora!

+581 estão orando agora.

Junte-se à corrente de oração.

Naum
Ver todos os capítulos de Naum