Pular para o conteúdo
Publicidade

ನೆಹೆಮೀಯ 13:10-12

OKCV Kannada Contemporary Version

10 ಲೇವಿಯರ ಪಾಲನ್ನು ಅವರಿಗೆ ಕೊಡಲಿಲ್ಲವೆಂದು ನನಗೆ ತಿಳಿಯಿತು. ಸೇವೆಯನ್ನು ಮಾಡುವ ಲೇವಿಯರೂ, ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿ ಹೋಗುತ್ತಿದ್ದರು. 11 ಆಗ ನಾನು ಅಧಿಕಾರಿಗಳನ್ನು ಗದರಿಸಿ ಅವರಿಗೆ, "ದೇವರ ಮಂದಿರವನ್ನು ಅಲಕ್ಷ್ಯಮಾಡಿದ್ದೇಕೆ?" ಎಂದು ವಾದಿಸಿದೆನು. ಬಿಟ್ಟುಹೋದವರನ್ನು ತಿರಿಗಿ ಕರೆಯಿಸಿ, ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.

12 ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ ಎಣ್ಣೆ ಇವುಗಳಲ್ಲಿ ಹತ್ತರಲ್ಲೊಂದು ಪಾಲನ್ನು ಕೊಠಡಿಗಳಲ್ಲಿ ತಂದರು.

Em outras traduções

  1. IRVKAN Indian Revised Version (IRV) - Kannada - 2019

    10 ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು. 11 ಇದರ ದೆಸೆಯಿಂದ ನಾನು ಅಧಿಕಾರಿಗಳನ್ನು ಗದರಿಸಿ, "ದೇವಾಲಯವನ್ನು ಅಲಕ್ಷ್ಯ ಮಾಡಿದ್ದೇಕೆ?" ಎಂದು ಕೇಳಿದ್ದಲ್ಲದೆ ಬಿಟ್ಟು ಹೋದವರನ್ನು ಪುನಃ ಕರೆಯಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು. 12 ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.