1 ಜನರೆಲ್ಲರು ಏಕವಾಗಿ ನೀರು ಬಾಗಿಲಿಗೆ ಎದುರಾಗಿರುವ ಬೀದಿಯಲ್ಲಿ ಕೂಡಿಕೊಂಡು ಬಂದರು. ಯೆಹೋವ ದೇವರು ಇಸ್ರಾಯೇಲರಿಗೆ ಆಜ್ಞಾಪಿಸಿದ ಮೋಶೆಯ ನಿಯಮದ ಗ್ರಂಥವನ್ನು ತೆಗೆದುಕೊಂಡು ಬರಲು ಜನರು ನಿಯಮಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
2 ಹೀಗೆಯೇ ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಯಾಜಕನಾದ ಎಜ್ರನು ದೇವರ ನಿಯಮವನ್ನು ತೆಗೆದುಕೊಂಡು ಬಂದನು. 3 ಅನಂತರ ಎಜ್ರನು ನೀರಿನ ಬಾಗಿಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದವರೆಗೆ ಓದಿದನು. ಜನರೆಲ್ಲರು ನಿಯಮದ ಗ್ರಂಥಕ್ಕೆ ಕಿವಿಗೊಟ್ಟರು.
8 ಜನರು ಎದ್ದು ನಿಂತ ನಂತರ, ಅವರು ದೇವರ ನಿಯಮವನ್ನು ಸ್ಪಷ್ಟವಾಗಿ ಓದುತ್ತಾ, ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು.
18 ಎಜ್ರನು ಮೊದಲನೆಯ ದಿವಸದಿಂದ ಕಡೇ ದಿವಸದವರೆಗೂ ದಿನದಿನವೂ ದೇವರ ನಿಯಮದ ಗ್ರಂಥವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೆಯ ದಿವಸದಲ್ಲಿ ಪದ್ಧತಿಯ ಪ್ರಕಾರ ಸಭೆಯು ಸೇರಿತ್ತು.