31 ಆದರೆ ಅವನ ಸಂಗಡ ಹೋದ ಜನರು, "ಆ ಜನರ ಬಳಿಗೆ ಹೋಗುವುದಕ್ಕೆ ನಮ್ಮಿಂದಾಗುವುದಿಲ್ಲ, ಅವರು ನಮಗಿಂತ ಬಲಿಷ್ಠರಾಗಿದ್ದಾರೆ," ಎಂದರು. 32 ಅವರು ಸಂಚರಿಸಿ ನೋಡಿದಂಥ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, "ನಾವು ಸಂಚರಿಸಿ ನೋಡಿ ಬಂದ ದೇಶವು ತನ್ನಲ್ಲಿ ವಾಸವಾಗಿರುವವರನ್ನೇ ತಿಂದುಬಿಡುವ ದೇಶವಾಗಿದೆ. ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾ ಶರೀರದ ಮನುಷ್ಯರು. 33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ13:33 ನೆಫೀಲಿಯ ಎಂದರೆ ಅನಾಕ್ ವಂಶ ವಂಶದವರಾದ ಮಹಾಶರೀರವುಳ್ಳ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳ ಹಾಗೆ ಇದ್ದೆವು. ಅವರ ದೃಷ್ಟಿಗೂ ನಾವು ಹಾಗೆಯೇ ಕಾಣಿಸಿದೆವು," ಎಂದರು.
Publicidade
ಅರಣ್ಯಕಾಂಡ 13
Estes versículos te tocaram? Ore agora!
+581 estão orando agora.
Junte-se à corrente de oração.