Pular para o conteúdo
Publicidade

ಅರಣ್ಯಕಾಂಡ 14:1-9

ಜನರ ದಂಗೆ

1 ಆಗ ಜನರೆಲ್ಲರೂ ತಮ್ಮ ಸ್ವರವೆತ್ತಿ ಆ ರಾತ್ರಿಯೆಲ್ಲಾ ಅತ್ತರು. 2 ಇಸ್ರಾಯೇಲರೆಲ್ಲರು ಮೋಶೆಗೂ ಆರೋನನಿಗೂ ವಿರೋಧವಾಗಿ ಗೊಣಗುಟ್ಟಿದರು. ಅವರು, "ನಾವು ಈಜಿಪ್ಟ್ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಮರುಭೂಮಿಯಲ್ಲಾದರೂ ಸತ್ತಿದ್ದರೆ ಚೆನ್ನಾಗಿತ್ತು. 3 ನಾವು ಖಡ್ಗದಿಂದ ಕೊಲೆಯಾಗುವ ಹಾಗೆಯೂ ನಮ್ಮ ಹೆಂಡತಿಯರು ಮಕ್ಕಳು ಸುಲಿಗೆಯಾಗುವ ಹಾಗೆಯೂ ಯೆಹೋವ ದೇವರು ನಮ್ಮನ್ನು ಈ ದೇಶಕ್ಕೆ ಏಕೆ ಬರಮಾಡಿದ್ದಾರೆ? ಈಜಿಪ್ಟ್ ದೇಶಕ್ಕೆ ನಾವು ತಿರುಗಿ ಹೋಗುವುದು ನಮಗೆ ಒಳ್ಳೆಯದಲ್ಲವೋ? 4 ನಾವು ನಾಯಕನನ್ನು ನೇಮಿಸಿಕೊಂಡು ಈಜಿಪ್ಟ್ ದೇಶಕ್ಕೆ ಹಿಂದಿರುಗೋಣ ಬನ್ನಿರಿ," ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.

5 ಆಗ ಮೋಶೆಯೂ ಆರೋನನೂ ಇಸ್ರಾಯೇಲರ ಸಮಸ್ತ ಜನರ ಕೂಟದ ಮುಂದೆ ಅಡ್ಡಬಿದ್ದರು. 6 ಇದಲ್ಲದೆ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು, 7 ಇಸ್ರಾಯೇಲರ ಸಮಸ್ತ ಜನಸಮೂಹಕ್ಕೆ, "ಸಂಚರಿಸಿ ನೋಡುವುದಕ್ಕೆ ನಾವು ದಾಟಿಹೋದ ದೇಶವು ಅತ್ಯುತ್ತಮವಾದ ದೇಶವೇ. 8 ಯೆಹೋವ ದೇವರು ನಮ್ಮನ್ನು ಇಷ್ಟಪಟ್ಟರೆ ಹಾಲೂ ಜೇನೂ ಹರಿಯುವ ದೇಶವಾಗಿರುವ ಆ ದೇಶಕ್ಕೆ ನಮ್ಮನ್ನು ಬರಮಾಡಿ, ಅದನ್ನು ನಮಗೆ ಕೊಡುವರು. 9 ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ," ಎಂದರು.

Estes versículos te tocaram? Ore agora!

+581 estão orando agora.

Junte-se à corrente de oração.