ಬಟ್ಟೆಗಳ ಗೊಂಡೆಗಳು
37 ಯೆಹೋವ ದೇವರು ಮೋಶೆಗೆ, 38 "ನೀನು ಇಸ್ರಾಯೇಲರಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಅವರು ತಮ್ಮ ತಲತಲಾಂತರಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಅಂಚಿನಲ್ಲಿ ಗೊಂಡೆಗಳನ್ನು ಮಾಡಿಕೊಳ್ಳಬೇಕು. ಸೆರಗಿನ ಗೊಂಡೆಗಳ ಮೇಲೆ ನೀಲಿ ದಾರವನ್ನು ಹಾಕಬೇಕು. 39 ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು, ಅದನ್ನು ನೋಡುವಾಗ, ಯೆಹೋವ ದೇವರ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರಮಾಡಿ, ನಿಮ್ಮ ಹೃದಯ ಹಾಗೂ ಇಚ್ಛೆಗನುಸಾರ ನಿಮ್ಮ ಕಣ್ಣುಗಳು ಜಾರತ್ವ ಮಾಡುವಂತೆ ಹಿಂಬಾಲಿಸದೆ ಇರುವಿರಿ. 40 ನೀವು ನನ್ನ ಆಜ್ಞೆಗಳನ್ನೆಲ್ಲಾ ನೆನಸಿ, ಅವುಗಳ ಪ್ರಕಾರಮಾಡಿ, ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. 41 ನಾನು ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ "