1 ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು:
2 ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ;
ವಿವೇಕದ ಮಾತುಗಳನ್ನು ಗ್ರಹಿಸುವುದಕ್ಕೆ;
3 ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು
ನ್ಯಾಯ ಮತ್ತು ಯುಕ್ತವಾದವುಗಳನ್ನು ನಡೆಸುವ ಜ್ಞಾನೋಕ್ತಿಗಳು;
4 ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ
ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.
5 ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ;
ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.
6 ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು
ಅರ್ಥಮಾಡಿಕೊಳ್ಳಲು ಇವು ಬರೆಯಲಾಗಿವೆ.
7 ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ.
ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.