ಜ್ಞಾನದಿಂದ ಆಗುವ ನೈತಿಕ ಲಾಭಗಳು
1 ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ,
ನನ್ನ ಆಜ್ಞೆಗಳನ್ನು ನಿನ್ನಲ್ಲಿ ಕಾದಿರಿಸು.
2 ನೀನು ಜ್ಞಾನಕ್ಕೆ ಕಿವಿಗೊಟ್ಟು,
ತಿಳುವಳಿಕೆಗೆ ನಿನ್ನ ಹೃದಯವನ್ನು ತಿರುಗಿಸು,
3 ಹೌದು, ನೀನು ಒಳನೋಟಕ್ಕಾಗಿ ಮೊರೆಯಿಟ್ಟು,
ತಿಳುವಳಿಕೆಗಾಗಿ ನಿನ್ನ ಸ್ವರವೆತ್ತಿ,
4 ಬೆಳ್ಳಿಯಂತೆ ನೀನು ಅದನ್ನು ಹಂಬಲಿಸಿದರೆ,
ನಿಗೂಢ ನಿಕ್ಷೇಪದಂತೆ ನೀನು ಅದಕ್ಕಾಗಿ ಹುಡುಕಿದರೆ,
5 ಆಗ ನೀನು ಯೆಹೋವ ದೇವರ ಭಯಭಕ್ತಿಯನ್ನು ತಿಳಿದುಕೊಳ್ಳುವೆ;
ದೇವರ ಅರಿವನ್ನು ಕಂಡುಕೊಳ್ಳುವೆ.
6 ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ;
ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.