6 ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ;
ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.
7 ನೀತಿವಂತರಿಗೋಸ್ಕರ ದೇವರು ಸುಜ್ಞಾನವನ್ನು ಕೂಡಿಸಿಡುವರು,
ನಿರ್ದೋಷಿಯಾಗಿ ನಡೆದುಕೊಳ್ಳುವವರಿಗೆ ದೇವರು ಗುರಾಣಿಯಾಗಿದ್ದಾರೆ.
8 ನ್ಯಾಯವಂತರ ದಾರಿಗಳನ್ನು ದೇವರು ಕಾಯುತ್ತಾರೆ;
ತಮ್ಮ ನಂಬಿಗಸ್ತರ ಮಾರ್ಗವನ್ನು ಭದ್ರಪಡಿಸುತ್ತಾರೆ.