Pular para o conteúdo
Publicidade

ಜ್ಞಾನೋಕ್ತಿಗಳು 22:1,7,26,27

OKCV Kannada Contemporary Version

1 ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ;

ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ.

7 ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ;

ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು.

ನಾಲ್ಕನೆಯ ಹೇಳಿಕೆ

26 ಬೇರೆಯವರ ಸಾಲವನ್ನು ಖಾತರಿಪಡಿಸಲೂ

ಬೇರೊಬ್ಬರಿಗೆ ಭದ್ರತೆಯನ್ನು ನೀಡಲು ಒಪ್ಪಬೇಡ.

27 ಸಾಲ ತೀರಿಸಲು ನಿನಗೆ ಏನೂ ಇಲ್ಲದೆ ಹೋದರೆ

ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದುಕೊಂಡು ಹೋಗುವನಲ್ಲವೇ?

Em outras traduções

  1. IRVKAN Indian Revised Version (IRV) - Kannada - 2019

    1 ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ,

    ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.

    7 ಬಲ್ಲಿದನು ಬಡವನಿಗೆ ಒಡೆಯ,

    ಸಾಲಗಾರನು ಸಾಲಕೊಟ್ಟವನಿಗೆ ಸೇವಕ.

    26 ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ,

    ನೀನೂ ಒಬ್ಬನಾಗಬೇಡ,

    27 ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು,

    ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ?

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.