9 ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ,
ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.
10 ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ;
ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ;
ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.