25 ಆಕೆಯ ಉಡುಪು ಬಲವೂ ಘನತೆಯೂ ಆಗಿವೆ.
ಭವಿಷ್ಯತ್ತಿನ ಭಯವಿಲ್ಲದೆ ಆಕೆಯು ನಗುವಳು.
26 ಆಕೆಯು ಜ್ಞಾನದಿಂದ ಮಾತನಾಡುತ್ತಾಳೆ.
ಆಕೆಯ ನಾಲಿಗೆಯ ಮೇಲೆ ನಂಬಿಗಸ್ತ ಶಿಕ್ಷಣ ಇದೆ.
27 ಆಕೆಯು ತನ್ನ ಗೃಹಕೃತ್ಯಗಳನ್ನೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಾಳೆ.
ಸೋಮಾರಿಯಾಗಿ ಕೆಲಸಮಾಡದೆ ಆಹಾರವನ್ನು ತಿನ್ನುವುದಿಲ್ಲ.
28 ಆಕೆಯ ಮಕ್ಕಳು ಎದ್ದು, ಆಕೆಯನ್ನು ಧನ್ಯಳೆಂದು ಕರೆಯುವರು.
ಆಕೆಯ ಪತಿಯು ಸಹ ಆಕೆಯನ್ನು,
29 "ಬಹುಮಂದಿ ಸ್ತ್ರೀಯರು ಗುಣವತಿಯರಾಗಿದ್ದಾರೆ.
ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು," ಎಂದು ಹೊಗಳುವನು.
30 ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ.
ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.