ಬುದ್ಧಿಹೀನತೆಯ ವಿರುದ್ಧ ಎಚ್ಚರಿಕೆಗಳು
1 ಮಗನೇ, ನಿನ್ನ ನೆರೆಯವನಿಗೆ ನೀನು ಹೊಣೆಯಾಗಿದ್ದರೆ,
ಪರನಿಗಾಗಿ ನಿನ್ನ ಕೈಯನ್ನು ಒಡ್ಡಿದ್ದರೆ,
2 ನೀನು ನುಡಿದ ನಿನ್ನ ಬಾಯಿ ಮಾತುಗಳಿಂದಲೇ ಸಿಕ್ಕಿಕೊಂಡಿರುವೆ.
ನಿನ್ನ ಬಾಯಿ ಮಾತುಗಳೇ ನಿನ್ನನ್ನು ಸೆರೆಹಿಡಿದಿದೆ.
3 ಮಗನೇ, ನೀನು ನಿನ್ನ ನೆರೆಯವನ ಕೈಗೆ ಸಿಕ್ಕಿಕೊಂಡದರಿಂದ,
ನಿನ್ನನ್ನು ನೀನು ತಪ್ಪಿಸಿಕೊಳ್ಳಲು ಇದನ್ನು ಮಾಡು:
ಹೋಗಿ ನಿನ್ನನ್ನು ನೀನು ತಗ್ಗಿಸಿಕೋ,
ನಿನ್ನ ನೆರೆಯವನಿಗೆ ವಿಶ್ರಾಂತಿಯನ್ನು ಕೊಡಬೇಡ.
4 ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ
ನಿನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
5 ಬೇಟೆಗಾರನ ಕೈಯಿಂದ ಜಿಂಕೆಯೂ,
ಬಲೆ ಬೀಸುವವನ ಕೈಯಿಂದ ಪಕ್ಷಿಯೂ ತಪ್ಪಿಸಿಕೊಳ್ಳುವಂತೆ ನೀನು ತಪ್ಪಿಸಿಕೋ.