Pular para o conteúdo
Publicidade

ಜ್ಞಾನೋಕ್ತಿಗಳು 6:20-23

OKCV Kannada Contemporary Version

ವ್ಯಭಿಚಾರಕ್ಕೆ ವಿರುದ್ಧವಾಗಿ ಎಚ್ಚರಿಕೆ

20 ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಗೊಳ್ಳು,

ನಿನ್ನ ತಾಯಿಯ ಬೋಧನೆಯನ್ನು ತ್ಯಜಿಸಬೇಡ.

21 ಅವುಗಳನ್ನು ಯಾವಾಗಲೂ ನಿನ್ನ ಹೃದಯದಲ್ಲಿ ಬಂಧಿಸಿಕೋ.

ಅವುಗಳನ್ನು ನಿನ್ನ ಕೊರಳಿಗೆ ಧರಿಸಿಕೋ.

22 ನೀನು ನಡೆಯುವಾಗ ಅವು ನಿನಗೆ ಮಾರ್ಗದರ್ಶಿಯಾಗಿರುತ್ತವೆ.

ನೀನು ಮಲಗುವಾಗ ಅವು ನಿನ್ನನ್ನು ಕಾಯುತ್ತವೆ.

ನೀನು ಎಚ್ಚರಗೊಂಡಾಗ ಅವು ನಿನ್ನೊಂದಿಗೆ ಮಾತಾಡುತ್ತವೆ.

23 ಆಜ್ಞೆಯೇ ದೀಪವಾಗಿದೆ,

ಬೋಧನೆಯೇ ಬೆಳಕಾಗಿದೆ;

ಶಿಕ್ಷಣದ ತಿದ್ದುವಿಕೆಗಳು

ಜೀವ ಮಾರ್ಗವಾಗಿವೆ.

Em outras traduções

  1. IRVKAN Indian Revised Version (IRV) - Kannada - 2019

    20 ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು,

    ತಾಯಿಯ ಉಪದೇಶವನ್ನು ಬಿಡಬೇಡ.

    21 ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ,

    ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ.

    22 ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು,

    ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು,

    ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.

    23 ಆಜ್ಞೆಯೇ ದೀಪ, ಉಪದೇಶವೇ ಬೆಳಕು,

    ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.