6 ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ,
ಅದರ ನಡವಳಿಕೆಯನ್ನು ನೋಡಿ ಜ್ಞಾನವಂತನಾಗು.
7 ನಾಯಕನಾಗಲೀ, ಮೇಲ್ವಿಚಾರಕನಾಗಲೀ,
ಅಧಿಕಾರಿಯಾಗಲೀ ಇರುವೆಗೆ ಇಲ್ಲದೆ ಹೋದರೂ,
8 ಬೇಸಿಗೆಯಲ್ಲಿ ಅದು ತನ್ನ ಆಹಾರವನ್ನು ಸಂಗ್ರಹಿಸುತ್ತದೆ.
ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿಕೊಳ್ಳುತ್ತದೆ.
9 ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆ ಮಾಡುವುದು?
ನಿನ್ನ ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ?
10 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ,
ಇನ್ನೂ ಸ್ವಲ್ಪ ವಿಶ್ರಾಂತಿಗಾಗಿ ಕೈ ಮುದುರಿಕೊಳ್ಳುವೆ ಎನ್ನುವೆಯಾ?
11 ಹೀಗೆ ನಿನಗೆ ಬಡತನವು ಕಳ್ಳನಂತೆಯೂ
ಕೊರತೆಯು ಶಸ್ತ್ರಧಾರಿಯಂತೆಯೂ ನಿನ್ನ ಮೇಲೆ ಬರುವುವು.