ನಂಬಿಕೆಯ ಮೂಲಕ ನೀತಿವಂತರೆಂಬ ನಿರ್ಣಯ
21 ಆದರೆ ಈಗ ನಿಯಮವಿಲ್ಲದೆ ದೇವರ ನೀತಿಯು ಪ್ರಕಟವಾಗಿದೆ. ಅದಕ್ಕೆ ನಿಯಮವೂ ಪ್ರವಾದಿಗಳೂ ಸಾಕ್ಷಿಕೊಡುತ್ತಾರೆ. 22 ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ. 23 ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ. 24 ಆದರೆ ಕ್ರಿಸ್ತ ಯೇಸುವಿನಲ್ಲಿ ಬಂದ ವಿಮೋಚನೆಯ ಮೂಲಕ ಅವರು ದೇವರ ಕೃಪೆಯಿಂದ ಉಚಿತವಾಗಿ ನೀತಿವಂತರೆಂದು ನಿರ್ಣಯ ಹೊಂದುತ್ತಾರೆ.